ಸುಳ್ಳು, ಸತ್ಯ, ಕಾವ್ಯ, ಮತ್ತು ನೇಮಿಚಂದ್ರ
ಕಟ್ಟುಗೆ ಕಟ್ಟದಿರ್ಕೆ ಕಡಲಂ ಕಪಿಸಂತತಿ, ವಾಮನಕ್ರಮಂ
ಮುಟ್ಟುಗೆ ಮುಟ್ಟದಿರ್ಕೆ ಮುಗಿಲಂ, ಹರನಂ ನರನೊತ್ತಿ ಗಂಟಲಂ
ಮೆಟ್ಟುಗೆ ಮೆಟ್ಟದಿರ್ಕೆ, ಕವಿಗಳ್ ಕೃತಿಬಂಧದೊಳಲ್ತೆ ಕಟ್ಟಿದರ್,
ಮುಟ್ಟಿದರೊತ್ತಿ ಮೆಟ್ಟಿದರದೇನಳವಗ್ಗಳಮೋ ಕವೀಂದ್ರರಾ!
- ನೇಮಿಚಂದ್ರ, ಲೀಲಾವತಿ ಪ್ರಬಂಧ